ಗೋಣಿಕೊಪ್ಪ ವರದಿ, ಮೇ 17: ಜಿಲ್ಲಾ ರಕ್ತನಿಧಿ ಕೇಂದ್ರ ಹಾಗೂ ಸ್ವಯಂ ಪ್ರೇರಣಾ ಬಳಗದ ವತಿಯಿಂದ ರಕ್ತದಾನ ಶಿಬಿರವನ್ನು ಗೋಣಿಕೊಪ್ಪ ಮಾಂಡೋವಿ ಕಾರ್ ಶೋರೂಮ್‍ನಲ್ಲಿ ತಾ. 18 ರಂದು ಆಯೋಜಿಸಲಾಗಿದೆ.
ಬೆಳಗ್ಗೆ 10. 30 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಶಿಬಿರ ನಡೆಯಲಿದ್ದು, ದಾನಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9480085060 ಸಂಪರ್ಕಿಸಬಹುದಾಗಿದೆ ಎಂದು ಸ್ವಯಂ ಪ್ರೇರಣಾ ಬಳಗ ಅಧ್ಯಕ್ಷೆ ಕೊಣಿಯಂಡ ಕಾವ್ಯ ಸಂಜು ಹೇಳಿಕೆಯಲ್ಲಿ ತಿಳಿಸಿದ್ದಾರೆ.