ಮಡಿಕೇರಿ, ಮೇ 17: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅವರ ಕೋರಿಕೆಯಂತೆ ತಾ. 19 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ

66/11 ಕೆ.ವಿ ಪೊನ್ನಂಪೇಟೆ, 66/11 ಕೆ.ವಿ ವೀರಾಜಪೇಟೆ, 33/11 ಕೆ.ವಿ ಶ್ರೀಮಂಗಲ, 33/11 ಕೆ.ವಿ ಸಿದ್ದಾಪುರ ಹಾಗೂ 33/11 ಕೆ.ವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅರಕಲಗೂಡು ಮಲ್ಲಿಪಟ್ಟಣದಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ಅವರು ನಿರ್ವಹಿಸಬೇಕಾಗುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಅದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಾಲಪುರ, ಬಲ್ಲಾರಳ್ಳಿ, ಕಿತ್ತೂರು ಗೌಡಳ್ಳಿ, ನಿಡ್ತ, ಅಂಕನಹಳ್ಳಿ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಎಂದು ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ತಿಳಿಸಿದ್ದಾರೆ.