ಕುಶಾಲನಗರ, ಮೇ 18: ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ರುವ ಜನರಿಗೆ ಸಹಾಯಹಸ್ತ ನೀಡುವುದು ಪ್ರತಿಯೊಂದು ಸಂಘ ಸಂಸ್ಥೆಗಳ ಆದ್ಯ ಕರ್ತವ್ಯವಾಗಬೇಕು ಎಂದು ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕರಾದ ಮಂಜುನಾಥ್ ಗುಂಡುರಾವ್ ತಿಳಿಸಿದ್ದಾರೆ.
ಅವರು ಕುಶಾಲನಗರ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಆವರಣದಲ್ಲಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರು, ಆಗಮಿಕರು ಮತ್ತು ಉಪಾದಿವಂತ ಒಕ್ಕೂಟದ ವತಿಯಿಂದ ಕುಶಾಲನಗರದ 35 ಕ್ಕೂ ಅಧಿಕ ಅರ್ಚಕರು ಮತ್ತು ಪುರೋಹಿತರಿಗೆ ಅಗತ್ಯ ವಸ್ತುಗಳ ಕಿಟ್ ವಿತರಣೆ ಮಾಡಿ ಮಾತನಾಡಿದರು.
ಒಕ್ಕೂಟದ ರಾಜ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅವರ ಅಪೇಕ್ಷೆಯಂತೆ ಜಿಲ್ಲೆಯ ಕುಶಾಲನಗರ, ಸೋಮವಾರಪೇಟೆ, ಸುಂಟಿಕೊಪ್ಪ, ಮಡಿಕೇರಿ ವ್ಯಾಪ್ತಿಯ ಅರ್ಚಕರು, ಪುರೋಹಿತರಿಗೆ ಅಗತ್ಯ ಆಹಾರ ವಸ್ತುಗಳ ವಿತರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭ ಕುಶಾಲನಗರ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಪಿ.ಎನ್.ವಿಜಯೇಂದ್ರ, ಪ್ರಮುಖರಾದ ಬಿ.ಎಸ್.ರಾಧಾಕೃಷ್ಣ, ಮುರಳೀಧರ್, ಎಂ.ವಿ.ನಾರಾಯಣ, ಕೆ.ಎಸ್.ರಾಜಶೇಖರ್ ಮತ್ತಿತರರು ಇದ್ದರು.