ಸೋಮವಾರಪೇಟೆ,ಮೇ 18: ಲಾಕ್‍ಡೌನ್ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಎಲ್ಲ ದೇವಾಲಯಗಳು ಮುಚ್ಚಿರುವದರಿಂದ ಅರ್ಚಕರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆ ಸರ್ಕಾರ ಅರ್ಚಕರಿಗೆ ಸಹಾಯಧನ ಘೋಷಿಸಬೇಕೆಂದು ಜಿಲ್ಲಾ ವೀರಶೈವ ಲಿಂಗಾಯಿತ, ಜಂಗಮ, ಅರ್ಚಕರು ಮತ್ತು ಪುರೋಹಿತರ ಸಂಘದ ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ತಾಲೂಕು ಶಿರಸ್ತೇದಾರ್ ವೆಂಕಟೇಶ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಮೋಹನ್ ಮೂರ್ತಿ ಶಾಸ್ತ್ರೀ, ಯೋಗೇಶ್ ಶಾಸ್ತ್ರಿ ಉಪಸ್ಥಿತರಿದ್ದರು.