Éಂಗಳೂರು, ಮೇ 18: ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಜೂನ್ 25ರಿಂದ ಜುಲೈ 4ರವರೆಗೆ ನಡೆಸಲಾಗುತ್ತದೆ. ಇಂಗ್ಲೀಷ್, ಗಣಿತ ಹಾಗೂ ವಿಜ್ಞಾನ ವಿಷಯಗಳ ಪರೀಕ್ಷೆಗೆ ಒಂದು ದಿನದ ಅಂತರ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ 2,879 ಪರೀಕ್ಷಾ ಕೇಂದ್ರಗಳಿವೆ. 43,720 ಕೊಠಡಿಗಳನ್ನು ಪರೀಕ್ಷೆಗೆ ಬಳಸಿಕೊಳ್ಳಲಾಗುತ್ತಿದೆ. ಪ್ರತೀ ಕೊಠಡಿಯಲ್ಲಿಯೂ ಸ್ಯಾನಿಟೈಸರ್ ಬಳಸಲಾಗುವುದು. ಎಲ್ಲಾ ಕೇಂದ್ರಗಳಲ್ಲಿಯೂ ಥರ್ಮಲ್ ಸ್ಕ್ಯಾನರ್ ಬಳಕೆ ಮಾಡಲಾಗುವುದು ಆ ಮೂಲಕ ಪ್ರತೀ ದಿನ ಪರೀಕ್ಷಾರ್ಥಿಯ ಪರೀಕ್ಷೆ ಕಡ್ಡಾಯಗೊಳಿಸಲಾಗುತ್ತದೆ. ಆರೋಗ್ಯ ಇಲಾಖಾಧಿಕಾರಿಗಳ ಸಲಹೆಯಂತೆ ಪ್ರತೀ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಶಾರೀರಿಕ ಅಂತರ ಕಾಯ್ದುಕೊಳ್ಳಲಾಗುತ್ತದೆ. ಪ್ರತೀ ವಿದ್ಯಾರ್ಥಿ ಪರೀಕ್ಷೆಗೆ ಬರುವಾಗ ಮಾಸ್ಕ್ ಹಾಕಿಕೊಂಡಿರಬೇಕು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‍ನ ಕೆಡೆಟ್‍ಗಳಿಂದ ಪ್ರತೀ ವಿದ್ಯಾರ್ಥಿಗೂ 2 ಮಾಸ್ಕ್ ನೀಡಲು ತಯಾರಿ ನಡೆಸಲಾಗುವುದು. ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.ಸಿಬಿಎಸ್‍ಇ 10 ಮತ್ತು 12ನೇ ತರಗತಿಯ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್‍ಇ) 10 ಮತ್ತು 12ನೇ ತರಗತಿ (ಮೊದಲ ಪುಟದಿಂದ) ಪರೀಕ್ಷೆಯನ್ನು ಈ ವರ್ಷದ ಜುಲೈನಲ್ಲಿ ನಡೆಸಲು ಸಮಯ ನಿಗದಿಪಡಿಸಿ ಪರಿಷ್ಕøತ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಕೊರೊನಾ ವೈರಸ್ ಕಾರಣದಿಂದ ಬಾಕಿ ಉಳಿದಿದ್ದ ಸಿಬಿಎಸ್‍ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳ ಪರಿಷ್ಕøತ ವೇಳಾಪಟ್ಟಿಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೆÇೀಖ್ರಿಯಾಲ್ ನಿಶಾಂಕ್ ಅವರು ಇಂದು ಟ್ವಿಟರ್‍ನಲ್ಲಿ ಬಿಡುಗಡೆ ಮಾಡಿದ್ದಾರೆ. ಪರಿಷ್ಕøತ ವೇಳಾಪಟ್ಟಿಯನ್ನು ಸಿಬಿಎಸ್‍ಇ ವೆಬ್‍ಸೈಟ್ ಛಿbse.ಟಿiಛಿ.iಟಿನಲ್ಲಿ ನೇರವಾಗಿ ನೋಡಬಹುದಾಗಿದೆ.