ಕುಶಾಲನಗರ, ಮೇ 18: ಕುಶಾಲನಗರವನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಕ್ರಮ ತೆಗೆದುಕೊಳ್ಳುವು ದಾಗಿ ರಾಜ್ಯ ಪೌರಾಡಳಿತ ಸಚಿವರಾದ ಡಾ. ನಾರಾಯಣಗೌಡ ಭರವಸೆ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರ ಮನವಿಗೆ ಸ್ಪಂದಿಸಿರುವ ಸಚಿವರು ಕುಶಾಲನಗರ ಪಟ್ಟಣ ಪಂಚಾಯಿತಿ ನೂತನ ಕಟ್ಟಡಕ್ಕೆ 5 ಕೋಟಿ ಮಂಜೂರು ಮಾಡುವುದಾಗಿ ತಿಳಿಸಿದ್ದಾರೆ. ಪಂಚಾಯ್ತಿಯನ್ನು ಜನಸಂಖ್ಯೆ ಆಧಾರದಲ್ಲಿ ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಪರಿಶೀಲನೆ ನಡೆಸ ಲಾಗುವುದು. ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಕಲ್ಪಿಸಲಾಗುವುದು ಎಂದಿರುವ ಸಚಿವರು ನಿಯಮಾನು ಸಾರ ಕಾರ್ಯಗತಗೊಳಿಸುವುದಾಗಿ ತಿಳಿಸಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಕುಶಾಲನಗರ ಬಿಜೆಪಿ ಪ್ರಮುಖರು ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು ಶಾಸಕರ ನೇತೃತ್ವದಲ್ಲಿ ನಿಯೋಗ ತೆರಳಿ ಸಚಿವರಿಗೆ ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.