ಸೋಮವಾರಪೇಟೆ,ಮೇ 18: ಲಾಕ್‍ಡೌನ್ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಕಲ್ಯಾಣ ಮಂಟಪಗಳಲ್ಲಿ ನಿಗದಿ ಯಾಗಿದ್ದ ಮದುವೆ ಕಾರ್ಯಕ್ರಮಗಳು ರದ್ದುಗೊಂಡಿದ್ದು, ಮುಂಗಡ ಹಣವನ್ನು ಕಟ್ಟಿದವರಿಗೆ ವಾಪಾಸ್ ನೀಡಬೇಕೆಂದು ಜಯಕರ್ನಾಟಕ ಸಂಘಟನೆ ಒತ್ತಾಯಿಸಿದೆ.
ಕೆಲ ಕಲ್ಯಾಣ ಮಂಟಪಗಳಲ್ಲಿ ಮುಂಗಡ ಹಣವನ್ನು ವಾಪಾಸ್ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರದ ಆದೇಶದಂತೆ ಎಲ್ಲಾ ಕಾರ್ಯಕ್ರಮಗಳು ರದ್ದುಗೊಂಡಿರುವದ ರಿಂದ ಕೂಡಲೆ ಜಿಲ್ಲಾಧಿಕಾರಿಗಳು ಮುಂಗಡ ಹಣವನ್ನು ಹಿಂದಿರುಗಿಸಲು ಸೂಚಿಸಬೇಕೆಂದು ಸಂಘಟನೆಯ ತಾಲೂಕು ಅಧ್ಯಕ್ಷ ಸಿ.ಬಿ. ಸುರೇಶ್ ಶೆಟ್ಟಿ ಒತ್ತಾಯಿಸಿದ್ದಾರೆ.