ಮಡಿಕೇರಿ, ಮೇ 19: ಲಾಕ್ಡೌನ್ ಸಂದರ್ಭ ಅವಿರತವಾಗಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ನಿಂದ ಊಟ ವಿತರಿಸಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಪೊಲೀಸರ ಸೇವಾ ಗುಣವನ್ನು ಗೌರವಿಸಲಾಯಿತು.
ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ನಿಂದ ಮಡಿಕೇರಿಯಲ್ಲಿ ಕರ್ತವ್ಯ ನಿರತ ಪೊಲೀಸರಿಗೆ 18 ದಿನಗಳ ಕಾಲ ಮಧ್ಯಾಹ್ನದ ಭೋಜನ ವಿತರಿಸಲಾಗಿತ್ತು. ರೋಟರಿ ಮಿಸ್ಟಿ ಹಿಲ್ಸ್ ಸದಸ್ಯರಿಂದ ಈ ಉದ್ದೇಶಕ್ಕೆ ರೂ. 71 ಸಾವಿರ ಸಂಗ್ರಹಿಸಲಾಗಿದೆ ಎಂದು ಮಿಸ್ಟಿ ಹಿಲ್ಸ್ ಅಧ್ಯಕ್ಷ ಜಗದೀಶ್ ಪ್ರಶಾಂತ್ ಮಾಹಿತಿ ನೀಡಿದ್ದಾರೆ.
ಲಾಕ್ಡೌನ್ ಸಂದರ್ಭ ಜನರ ಸಂಚಾರ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರವಾದ ಮಡಿಕೇರಿಯಲ್ಲಿ ಪೊಲೀಸರು ನಿರಂತರ ಶ್ರಮ ವಹಿಸಿದ್ದಾರೆ. ಇದನ್ನು ಪರಿಗಣಿಸಿ ಮಿಸ್ಟಿ ಹಿಲ್ಸ್ನಿಂದ ಪೊಲೀಸರಿಗೆ 18 ದಿನ ಊಟ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಪೊಲೀಸರ ಕರ್ತವ್ಯ ಕಾರ್ಯವೈಖರಿಯನ್ನು ಮಿಸ್ಟಿ ಹಿಲ್ಸ್ ತಂಡ ಪ್ರಶಂಸೆ ವ್ಯಕ್ತಪಡಿಸಿತು ಎಂದು ಜಗದೀಶ್ ಪ್ರಶಾಂತ್ ಹಾಗೂ ಕಾರ್ಯದರ್ಶಿ ಪ್ರಮೋದ್ ರೈ ತಿಳಿಸಿದ್ದಾರೆ.