ಸೋಮವಾರಪೇಟೆ,ಮೇ 19: ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರು, ಆಗಮಿಕರು ಮತ್ತು ಉಪಾಧಿವಂತರ ಒಕ್ಕೂಟದ ವತಿಯಿಂದ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಒಟ್ಟು 30 ಅರ್ಚಕರಿಗೆ ಆಹಾರ ಪದಾರ್ಥಗಳ ಕಿಟ್‍ಗಳನ್ನು ಸೋಮೇಶ್ವರ ದೇವಾಲಯದಲ್ಲಿ ವಿತರಿಸಲಾಯಿತು.

ಒಕ್ಕೂಟದ ಅಧ್ಯಕ್ಷ, ಮಾಜೀ ಸಚಿವ ದಿನೇಶ್ ಗುಂಡೂರಾವ್ ಅವರ ಸಹಕಾರದೊಂದಿಗೆ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ್ ಗುಂಡೂರಾವ್ ಹೇಳಿದರು.

ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಕುಶಾಲನಗರ ಬ್ರಾಹ್ಮಣ ಸಮಾಜದ ಅಧ್ಯಕ್ಷ ಪಿ.ಎನ್.ವಿಜಯೇಂದ್ರ, ಪ್ರಮುಖರಾದ ರಾಜಶೇಖರ್, ನಾರಾಯಣ್, ಪ್ರದೀಪ್, ರಾಜೀವ್, ಯಡೂರು ಹರೀಶ್, ಶ್ಯಾಮ್‍ಸುಂದರ್, ರಾಜೇಶ್, ರವಿಕುಮಾರ್, ಚಿತ್ರಕುಮಾರ್ ಉಪಸ್ಥಿತರಿದ್ದರು.