ಮಡಿಕೇರಿ, ಮೇ 19: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಖಜಾಂಚಿ ಹೆಚ್.ಎಂ. ನಂದಕುಮಾರ್ ಪ್ರಾಯೋಜಕತ್ವದಲ್ಲಿ ಮಡಿಕೇರಿಯ ಚಾಮುಂಡೇಶ್ವರಿ ನಗರ ಮತ್ತು ಮಲ್ಲಿಕಾರ್ಜುನ ನಗರಗಳ ಸುಮಾರು ಮುನ್ನೂರೈವತ್ತು ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ ಕಿಟ್ಟನ್ನು ಕಾಂಗ್ರೆಸ್ ಮುಖಂಡರು ವಿತರಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಸದಸ್ಯ ಟಿ.ಪಿ. ರಮೇಶ್, ಹೆಚ್.ಎಂ. ನಂದಕುಮಾರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಮಹಿಳಾ ಅಧ್ಯಕ್ಷೆ ಸುರಯ್ಯಾ ಅಬ್ರಹಾರ್, ತೆನ್ನೀರಾ ಮೈನಾ , ಪುಲಿಯಂಡ ಜಗದೀಶ್ , ಅಜ್ಜಳ್ಳಿ ರವಿ, ಪ್ರಕಾಶ್ ಆಚಾರ್ಯ, ಪ್ರಭುರೈ, ರವಿಗೌಡ, ಟಿ.ಪಿ. ನಾಣಯ್ಯ, ಯತೀಶ್ ಕುಮಾರ್, ಸ್ವರ್ಣಲತಾ, ಮೀನಾಜ್ ಪ್ರವೀಣ್, ಪೂರ್ಣಿಮಾ ಸೇರಿದಂತೆ ಕಾಂಗ್ರೆಸ್ ಪ್ರಮುಖರು ವಿತರಣೆ ಕಾರ್ಯದಲ್ಲಿ ಭಾಗಿಯಾಗಿದ್ದರು.