ಮಡಿಕೇರಿ, ಮೇ 20: ಜಿಲ್ಲೆಯಲ್ಲಿ ಕೋವಿಡ್-19ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇತರ ದೇಶ/ರಾಜ್ಯಗಳಿಂದ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕಡ್ಡಾಯವಾಗಿ ಸಾಂಸ್ಥಿಕ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ.

ಇತರ ದೇಶ/ರಾಜ್ಯ/ಜಿಲ್ಲೆಗಳಿಂದ ಕಳೆದ 14 ದಿನಗಳಲ್ಲಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರ ಪೈಕಿ ಸಂಪರ್ಕ ತಡೆಯಲ್ಲಿರುವ ಜನರ ವಿವರ ಕೆಳಕಂಡಂತಿದೆ.

ಇತರ ದೇಶದ ಜನರು- 13

ಇತರ ರಾಜ್ಯದ ಜನರು-465

ಒಟ್ಟು ಜನರು-478.

ಇಲ್ಲಿಯವರೆಗೆ ಒಟ್ಟು 1757 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.

ಪಾಸಿಟಿವ್ ಪ್ರಕರಣಗಳು- 02 (ಒಬ್ಬರು ಗುಣಮುಖರಾಗಿದ್ದಾರೆ), ನೆಗೆಟಿವ್ ವರದಿ ಬಂದ ಪ್ರಕರಣಗಳು-1538, ವರದಿ ನಿರೀಕ್ಷಿತ ಪ್ರಕರಣಗಳು-217. ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ 121 ಜನರು ದಾಖಲಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.