ಗೋಣಿಕೊಪ್ಪ ವರದಿ, ಮೇ 19: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪಿಸಿರುವ ಗಂಟಲು ದ್ರವ ಸಂಗ್ರಹ ಘಟಕವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ವೀರಾಜಪೇಟೆ ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್, ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ, ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್, ಉಪಾಧ್ಯಕ್ಷ ನೆಲ್ಲೀರ ಚಲನ್‍ಕುಮಾರ್ ಇದ್ದರು.