ಮಡಿಕೇರಿ, ಮೇ 21: ಕೊಡಗು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಮಾಡಲು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ನಿರ್ಧರಿಸಲಾಗಿದೆ ಎಂಬ ಸುಳ್ಳು ಸುದ್ದಿಗಳನ್ನು ಹರಿಯಬಿಡಲಾಗುತ್ತಿದೆ. ಈ ರೀತಿಯ ಯಾವುದೇ ನಿರ್ಧಾರಗಳನ್ನು ಚೇಂಬರ್ ಆಫ್ ಕಾಮರ್ಸ್ ವತಿಯಿಂದ ತೆಗೆದುಕೊಂಡಿರುವುದಿಲ್ಲ ಮತ್ತು ಈ ರೀತಿಯ ಸುಳ್ಳು ಸುದ್ದಿಗಳನ್ನು ಹಾಕುತ್ತಿರುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಯವರ ಬಳಿ ಈಗಾಗಲೇ ದೂರು ದಾಖಲಿಸಲಾಗಿದೆ ಎಂದು ಚೇಂಬರ್ ಆಫ್ ಕಾಮರ್ಸ್ ಸಮಿತಿ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ.