ಮಡಿಕೇರಿ, ಮೇ 21: ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಮೈಕಲ್ ಅವರು ಇದೀಗ ಸೇವೆಯಿಂದ ನಿವೃತ್ತರಾಗಿದ್ದಾರೆ. ಕಳೆದ 34 ವರ್ಷಗಳ ಕಾಲ ವೀರಾಜಪೇಟೆಯ ತಾಲೂಕು ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿದ ಮೈಕಲ್ ಅವರು, ಸಾರ್ವಜನಿಕರು ಹಾಗೂ ಮೇಲಧಿಕಾರಿಗಳ ಮೆಚ್ಚುಗೆಯನ್ನು ಗಳಿಸಿದ್ದರು.

ಇವರನ್ನು ಕಚೇರಿಯ ಸಿಬ್ಬಂದಿಗಳು ಹಾಗೂ ಅಧಿಕಾರಿ ವರ್ಗದವರು ಬೀಳ್ಕೊಟ್ಟರು. ಕೆಲವು ವರ್ಷಗಳಿಂದ ಇವರು ವಿಶೇಷವಾಗಿ ಮಳೆಗಾಲಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.