ಮಡಿಕೇರಿ, ಮೇ 21: ಕಾನೂರು ಬ್ಯಾಂಕ್ ಆಫ್ ಬರೋಡ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನೂರು, ಕೋತೂರು ಗ್ರಾಮಗಳಲ್ಲಿ ವಾಸವಾಗಿರುವ ವಲಸೆ ಹಾಗೂ ಲೈನ್‍ಮನೆ ನಿವಾಸಿಗಳಿಗೆ ಒಟ್ಟು 25 ಫಲಾನುಭವಿಗಳನ್ನು ಆಯ್ಕೆ ಮಾಡಿ ಆಹಾರ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭ ಬ್ಯಾಂಕ್ ವ್ಯವಸ್ಥಾಪಕರು, ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.