ಮಡಿಕೇರಿ, ಮೇ 21 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಾಣು ಜೀವಿ ವಿಭಾಗದಲ್ಲಿ ರೂ. 1.06 ಕೋಟಿ ವೆಚ್ಚದಲ್ಲಿ ವಿಪತ್ತು ನಿಧಿಯಡಿ ಕೋವಿಡ್ ಪರೀಕ್ಷೆಯ ಪ್ರಯೋಗಾಲಯವು ಸಿದ್ಧಗೊಂಡಿದ್ದು, ತಾ. 22 ರಂದು (ಇಂದು) ವಸತಿ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದಾರೆ.(ಮೊದಲ ಪುಟದಿಂದ) ಈ ಪ್ರಯೋಗಾಲಯದಲ್ಲಿ ಒಂದು ಬಾರಿಗೆ 100 ಮಂದಿಯ ಮೂಗು, ಗಂಟಲು ದ್ರವ ಮಾದರಿ ಪರೀಕ್ಷಿಸಬಹುದಾಗಿದೆ. ಇಲ್ಲಿಯವರೆಗೆ ಕೊಡಗು ಜಿಲ್ಲೆಯಿಂದ ಕೋವಿಡ್ ಪರೀಕ್ಷೆಗಾಗಿ ಸಂಗ್ರಹಿತ ಮಾದರಿಗಳನ್ನು ಮೈಸೂರಿನ ವೈದ್ಯಕೀಯ ಕಾಲೇಜಿಗೆ ಕಳುಹಿಸ ಲಾಗುತ್ತಿತ್ತು. ಇನ್ನು ಮುಂದೆ ಕೋವಿಡ್ ಪರೀಕ್ಷಾ ಸೌಲಭ್ಯವು ಜಿಲ್ಲೆಯಲ್ಲಿಯೇ ಲಭ್ಯವಾಗಲಿದೆ. ಮುಂದಿನ ಒಂದು ವಾರದಲ್ಲಿ ಪೂರ್ಣ ಪ್ರಮಾಣದ ಪರೀಕ್ಷೆಯು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲ ಯದಲ್ಲಿ ಪ್ರಾರಂಭವಾಗಲಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Iಅಒಖ) ಯಿಂದ ಅನುಮತಿ ಪಡೆದು ಈ ಪ್ರಯೋಗಾಲಯವನ್ನು ಇತರೆ ವೈರಾಣುಗಳಿಂದ ಹರಡುವ ರೋಗಗಳ ಪರೀಕ್ಷೆಗೂ ಬಳಸಬಹು ದಾಗಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ ತಿಳಿಸಿದ್ದಾರೆ.