ಮಡಿಕೇರಿ, ಮೇ 21: ಮಡಿಕೇರಿ ನಗರದ ಪೌರ ಕಾರ್ಮಿಕರಿಗೆ ಮಡಿಕೇರಿ ನಗರ ಸಭೆಯ ಮಾಜಿ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಖಜಾಂಚಿ ಹೆಚ್.ಎಂ. ನಂದಕುಮಾರ್ ನೇತೃತ್ವದಲ್ಲಿ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮ ನಡೆಯಿತು.

ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋವಿಡ್ ವಾರಿಯರ್ಸ್‍ಗಳಾಗಿ ದುಡಿಯುತ್ತಿರುವ ಪೌರ ಕಾರ್ಮಿಕರಿಗೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಧನ್ಯವಾದಗಳನ್ನು ಅರ್ಪಿಸಿದರು.

ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ದೇವಾಲಯ ಸಮಿತಿ ಅಧ್ಯಕ್ಷÀ ಪುಲಿಯಂಡ ಜಗದೀಶ್, ಮಾಜಿ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭುರೈ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ವಿ.ಜಿ. ಮೋಹನ್, ಸ್ವರ್ಣಲತಾ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಪ್ರಮುಖರಾದ ರವಿಗೌಡ, ವಾರ್ಡ್ ಅಧ್ಯಕ್ಷೆ ಪೂರ್ಣಿಮಾ, ಮಡಿಕೇರಿ ನಗರಸಭೆಯ ಸಿಬ್ಬಂದಿಗಳು ಪೌರ ಕಾರ್ಮಿಕರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಪೌರ ಕಾರ್ಮಿಕರು ಮತ್ತು ನಗರ ಸಭೆಯ ಸಿಬ್ಬಂದಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಯಿತು.