ಮಡಿಕೇರಿ, ಮೇ 21 : ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಕಾರ್ಯಾಲಯದ ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ 1077 ಗೆ ಹಲವಾರು ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗುತ್ತಿದೆ. ಆ ದಿಸೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಹಾಗೂ ಕ್ಷಿಪ್ರಗತಿಯಲ್ಲಿ ಪರಿಹರಿಸುವ ನಿಟ್ಟಿನಲ್ಲಿ ‘ನೇರ ಫೋನ್ ಇನ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ಆ ನಿಟ್ಟಿನಲ್ಲಿ ಚೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ತಾ. 22 ರಂದು ಮಧ್ಯಾಹ್ನ 3 ರಿಂದ 4 ಗಂಟೆವರೆಗೆ ಫೋನ್‍ಇನ್ ಕಾರ್ಯಕ್ರಮ ನಡೆಯಲಿದೆ. ಚೆಸ್ಕಾಂ ಇಲಾಖೆ ಅಧಿಕಾರಿಗಳು ಮತ್ತು ಇತರರು ಪಾಲ್ಗೊಂಡು ಸಾರ್ವಜನಿಕರಿಂದ ಅಹವಾಲು ಆಲಿಸಿ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.