ಗೋಣಿಕೊಪ್ಪಲು, ಮೇ 22: ವಿಪರೀತ ಗಾಳಿ ಬೀಸಿದ ಪರಿಣಾಮ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋತೂರುವಿಲ್ಲಿ ವಿದ್ಯುತ್ ಕಂಬಗಳು ರಸ್ತೆ ಗೆ ಬಿದ್ದು ಕೋತೂರು - ಕುಟ್ಟ ಸಂಪರ್ಕ ರಸ್ತೆ ಸಂಪೂರ್ಣ ಬಂದ್ ಆಗಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು.

ಸಮೀಪದಲ್ಲಿ ಹಾದು ಹೋಗಿರುವ 11 ಕೆ.ವಿ.ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಇದರ ಸಮೀಪದಲ್ಲೆ ಹಾದು ಹೋದ ಐದಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆ ಸಂಭವಿಸಿಲ್ಲ.

ಲೈನ್ ಮ್ಯಾನ್ ಗಳು ಆಗಮಿಸಿ ಕಂಬ ತೆರವು ಕಾರ್ಯ ಕೈಗೊಳ್ಳುವ ಸಂದರ್ಭ ರಸ್ತೆಯಲ್ಲಿ ನೂರಾರು ವಾಹನಗಳು ಗಂಟೆ ಗಟ್ಟಲೆ ಸಾಲು ಗಟ್ಟಿನಿಂತಿದ್ದವು. ಸಂಜೆಯ ವೇಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ ತೆರವು ಗೊಳಿಸಲಾಯಿತು. ಈ ಗ್ರಾಮದಲ್ಲಿ ವಿದ್ಯುತ್ ಸಂಪೂರ್ಣ ಕಡಿತ ಗೊಂಡಿದೆ ಎಂದು ತಿಳಿದು ಬಂದಿದೆ. ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ಕಂಬ ಅಳವಡಿಸಿರುವುದರಿಂದ ಆಗಾಗ್ಗೆ ಈ ಭಾಗದಲ್ಲಿ ವಿದ್ಯುತ್ ಕಂಬಗಳು ರಸ್ತೆಗೆ ಬೀಳುತ್ತಿವೆ. ಚೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.