ಸೋಮವಾರಪೇಟೆ, ಮೇ 22: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್‍ನ ಪ್ರಾರಂಭಕ್ಕೆ ಪಟ್ಟಣ ಪಂಚಾಯಿತಿ ಮುಂದಾಗಬೇಕೆಂದು ಇಂದಿರಾ ಗಾಂಧಿ ಅಭಿಮಾನಿಗಳ ಸಂಘ ಒತ್ತಾಯಿಸಿದೆ.

ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಂಘದ ಮನವಿ ಮೇರೆಗೆ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಅನುಮತಿ ನೀಡಿದ್ದರು. ಜವಾಬ್ದಾರಿಯನ್ನು ಪಟ್ಟಣ ಪಂಚಾಯಿತಿಗೆ ವಹಿಸಲಾಗಿತ್ತು. ಆದರೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕಾಮಗಾರಿ ಪ್ರಾರಂಭಕ್ಕೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್ ಆರೋಪಿಸಿದ್ದಾರೆ.