ವೀರಾಜಪೇಟೆ, ಮೇ 22: ಕೊರೊನಾ ಸೊಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಸಲುವಾಗಿ ಶೈಕ್ಷಣಿಕ ಸ್ವಯಂ ಸೇವಕರು ಮನೆಗೆ ಮನೆಗೆ ತೆರಳಿ ಜನಜಾಗೃತಿ ಮೂಡಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಮತ್ತು ಅಕ್ಷರ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಕೊರೊನಾ ಸೋಂಕಿನ ಬಗ್ಗೆ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಕ್ಷರ ಪ್ರತಿಷ್ಠಾನದ ಕಾರ್ಯಕರ್ತರು, ಸಮುದಾಯದ ನೆರವಿನಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗಣಿತ ಕಲಿಕಾ ಆಂದೋಲನದ ನಾಯಕರನ್ನು ಗುರುತಿಸಿ ಕೊಡಗಿನ 30 ಪಂಚಾಯಿತಿಗಳಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಇಬ್ಬರಂತೆ 202 ಮಂದಿ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಅಕ್ಷರ ಪ್ರತಿಷ್ಠಾನದ ಜಿಲ್ಲಾ ಸಂಯೋಜಕ ಕುಮಾರ್ ಸ್ವಾಮಿ ಕೊರೊನಾ ಸೋಂಕು ವಿರುದ್ಧದ ಹೋರಾಟ ನಿರಂತರವಾಗಿರುತ್ತದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.