ಮಡಿಕೇರಿ, ಮೇ 22: ಕೊರೊನಾ ವೈರಸ್ ಲಾಕ್ಡೌನ್ನಿಂದಾಗಿ ಯಾವುದೇ ಆದಾಯವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಧನ ರೂಪಾಯಿ ಐದು ಸಾವಿರವನ್ನು ಕೂಡಲೇ ಫಲಾನುಭವಿಗಳಿಗೆ ನೀಡುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರೆಟಿಕ್ ಟ್ರೆಡ್ ಯೂನಿಯನ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಈ ಸಂದರ್ಭ ಮಾತನಾಡಿದ ಯೂನಿಯನ್ನ ಅಧ್ಯಕ್ಷ ಕೆ.ಜಿ. ಪೀಟರ್, ಲಾಕ್ಡೌನ್ನಿಂದಾಗಿ ಯಾವುದೇ ಆದಾಯವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಶ್ರಮಿಕ ವರ್ಗ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಐದು ಸಾವಿರ ರೂಪಾಯಿ ಪರಿಹಾರ ಹಣ ಫಲಾನುಭವಿಗಳಿಗೆ ಇನ್ನೂ ತಲುಪಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಐದು ಸಾವಿರ ರೂಪಾಯಿ ಪರಿಹಾರ ಧನಕ್ಕಾಗಿ ಸೂಚಿಸಿರುವ ನಿಬಂಧನೆಗಳಲ್ಲಿ ಆಟೋ ಚಾಲಕರಿಗೆ ಬ್ಯಾಡ್ಜ್ ಕಡ್ಡಾಯಗೊಳಿಸಿರುವ ಕ್ರಮವನ್ನು ಕೈಬಿಡಬೇಕು ಮತ್ತು ಎಲ್ಲಾ ಆಟೋ ಚಾಲಕರಿಗೂ ಪರಿಹಾರ ಸಿಗುವಂತೆ ಯೋಜನೆಯಲ್ಲಿ ಬದಲಾವಣೆ ತರಬೇಕೆಂದು ಮನವಿ ಮಾಡಿದರು.
ಈ ಸಂದರ್ಭ ಎಸ್.ಡಿ.ಟಿ.ಯು. ಜಿಲ್ಲಾ ಕಾರ್ಯದರ್ಶಿ ಮೈಕಲ್ ವೇಗಸ್, ಮಡಿಕೇರಿ ಎಸ್ಡಿಟಿಯು ಆಟೋ ಚಾಲಕರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.