ಮಡಿಕೇರಿ, ಮೇ 22 : ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಮದೆನಾಡು ಬಳಿ ನಿರ್ಮಿಸಲಾಗಿರುವ ಮನೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವಿ.ರಾಮ್ ಪ್ರಸಾದ್ ಮನೋಹರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಇತರರು ಇದ್ದರು.