ಮಡಿಕೇರಿ, ಮೇ 24: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ/ಸೇವಾ ಘಟಕಗಳ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ತುಂಬಿದ ಅರ್ಹ ಅಭ್ಯರ್ಥಿಗಳು ತಿತಿತಿ.ಞviಛಿ.oಡಿg.iಟಿ [ಠಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ]ನಲ್ಲಿ ಅರ್ಜಿಗಳನ್ನು ಅಳವಡಿಸಿ ಅದರ ಪ್ರತಿಯನ್ನು 2 ಸೆಟ್ ದಾಖಲಾತಿಗಳನ್ನು ಜಂಟಿನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಈ ಕಚೇರಿಗೆ ಸಲ್ಲಿಸುವುದು. ಅಪೂರ್ಣವಾಗಿ ಭರ್ತಿ ಮಾಡಿದ ಹಾಗೂ ದಾಖಲೆಗಳನ್ನು ನೀಡದೆ ಇರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ, ದೂ. 08272-2284361 ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.