ಮಡಿಕೇರಿ, ಮೇ 25: ಮುಜರಾಯಿ ಇಲಾಖೆಯಲ್ಲಿ ನೋಂದಣಿಯಾದ ದೇವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವÀ ಅರ್ಚಕರು, ಪರಿಚಾರಕರು ಹಾಗೂ ಅಡುಗೆಯವರಿಗೆ ಮಾತ್ರ ರಾಜ್ಯ ಸರ್ಕಾರ ಪರಿಹಾರ ಘೋಷಿಸಿರುವುದು ಸರಿಯಾದ ಕ್ರಮವಲ್ಲ ಎಂದು ಕೊಡಗು ಜಿಲ್ಲಾ ಬ್ರಾಹ್ಮಣರ ಸಂಘದ ಅಧ್ಯಕ್ಷ ಎನ್. ಮಹಾಭಲೇಶ್ವರ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಮುಜಾರಾಯಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೇವಾಲಯಗಳಿಗಿಂತ ಖಾಸಗಿಯಾಗಿ, ಸಾರ್ವತ್ರಿಕವಾಗಿ ನಡೆಸುವ ದೇವಾಲಯಗಳೇ ಹೆಚ್ಚು. ಈ ವರ್ಗಕ್ಕೆ ಸೇರುವ ದೇವಾಲಯಗಳ ಅರ್ಚಕರಿಗೆ ಸರ್ಕಾರದ ಪ್ಯಾಕೇಜ್‍ನಿಂದ ಯಾವುದೇ ಲಾಭವಿಲ್ಲವೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗ್ರಾಮೀಣ ಭಾಗದ ಅರ್ಚಕರು, ಪುರೋಹಿತರು ಹಾಗೂ ಅಡುಗೆ ಕೆಲಸದವರಿಗೆ ಆಯಾಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫಲಾನುಭವಿಗಳೆಂದು ಗುರುತಿಸಿ ಪರಿಹಾರ ಧನದ ನೆರವು ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.