ಮಡಿಕೇರಿ, ಮೇ 26: ವೀರಾಜಪೇಟೆ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಿ.ಜಿ. ರಮಾ ಅವರನ್ನು ರಾಮನಗರಕ್ಕೆ ವರ್ಗಾಯಿಸಲಾಗಿದೆ. ಇಲ್ಲಿನ ಸಿವಿಲ್ ಜಡ್ಜ್ ಹಿರಿಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಡಿ.ಆರ್. ಜಯಪ್ರಕಾಶ್ ಅವರನ್ನು ಬೆಂಗಳೂರಿನ ಸಮುಚ್ಚಯ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.