ಸೋಮವಾರಪೇಟೆ, ಮೇ 26: ಸಮೀಪದ ತೋಳೂರು ಶೆಟ್ಟಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರಾಗಿ ನಿವೃತ್ತರಾಗುತ್ತಿರುವ ರಘುಚಂದ್ರ ಅವರನ್ನು ತೋಳೂರುಶೆಟ್ಟಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಹಾಲು ಉತ್ಪಾದಕರ ಸಹಕಾರ ಸಂಘದ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸಿದ್ದು ಗ್ರಾಮೀಣ ಭಾಗದಲ್ಲಿರುವ ಈ ಶಾಖೆಯು ದೇಶದಲ್ಲಿಯೇ ಜೀವ ವಿಮೆ ಪ್ರೀಮಿಯಂ ಸಂಗ್ರಹದಲ್ಲಿ ಮುಂಚೂಣಿ ಬ್ಯಾಂಕ್ ಎಂದು ಖ್ಯಾತಿ ಗಳಿಸಿ ಪ್ರಶಸ್ತಿಯನ್ನು ಸಹ ಪಡೆಯುವಂತೆ ಮಾಡುವಲ್ಲಿ ಇವರ ಪಾತ್ರ ಮಹತ್ತರವಾಗಿದೆ ಎಂದು ಸಂಘದ ಅಧ್ಯಕ್ಷ ಸೋಮಯ್ಯ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ ನೂತನ ವ್ಯವಸ್ಥಾಪಕ ಪ್ರತೀಕ್, ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.