ಗೋಣಿಕೊಪ್ಪಲು, ಮೇ 26: ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಶ್ರೀಮಂಗಲದಲ್ಲಿ ಸಾರ್ವಜನಿಕ ಹಿತದೃಷ್ಟಿ ಮನವಿಯ ಪೆÇೀಸ್ಟರನ್ನು ಪ್ರಚಾರಗೊಳಿಸಲಾಯಿತು. ಸಾರ್ವಜನಿಕ ಸ್ಥಳವನ್ನು ಶುಚಿಯಾಗಿಡುವ ನಿಟ್ಟಿನಲ್ಲಿ ಅಲ್ಲಲ್ಲಿ ಉಗುಳದಂತೆ, ಮಾಸ್ಕ್ ಕಡ್ಡಾಯದ ಬಗ್ಗೆ ಮತ್ತು ಉಲ್ಲಂಘಿಸಿದಲ್ಲಿ ತೆರಬೇಕಾದ ದಂಡದ ಬಗ್ಗೆ ಇದರಲ್ಲಿ ಮಾಹಿತಿಯನ್ನು ನೀಡಲಾಗಿದ್ದು, ಶ್ರೀಮಂಗಲ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಮಾಣಿರ ಮುತ್ತಪ್ಪ ಚಾಲನೆ ನೀಡಿದರು. ಈ ಸಂದರ್ಭ ಶ್ರೀಮಂಗಲ ಗ್ರಾಮ ಪಂಚಾಯಿತಿ ಸದಸ್ಯ ಸಿ.ಜೆ. ಕಾಳಯ್ಯ ಹಾಜರಿದ್ದರು. ಶ್ರೀಮಂಗಲದ ಪ್ರಮುಖ ಸ್ಥಳಗಳಲ್ಲಿ ಮತ್ತು ಬಸ್ ನಿಲ್ದಾಣದಲ್ಲಿ ಮಾಹಿತಿ ಪ್ರಚಾರ ಫಲಕವನ್ನು ಪ್ರಚುರಪಡಿಸಲಾಯಿತು.