ಮಡಿಕೇರಿ, ಮೇ 26: ವಯನಾಡ್ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್ಸಿ ಮತ್ತು ಪಿಯುಸಿ ವ್ಯಾಸಂಗ ಮಾಡುತ್ತಿರುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ವಯನಾಡ್ ಜಿಲ್ಲಾಡಳಿತದ ಸಹಕಾರದೊಂದಿಗೆ ಸುಗಮ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಈ ಸಂಬಂಧ ಕೊಡಗು ಜಿಲ್ಲಾ ಉಪನಿರ್ದೇಶಕರು ಮತ್ತು ಕುಟ್ಟ ಪೊಲೀಸ್ ವೃತ್ತ ನಿರೀಕ್ಷಕರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ಪರೀಕ್ಷೆಗಳು ಇಂದಿನಿಂದ ಪ್ರಾರಂಭವಾಗಿದ್ದು, ಪರೀಕ್ಷೆಗಳು ಮುಗಿದ ನಂತರ ಸದರಿ ವಿದ್ಯಾರ್ಥಿಗಳನ್ನು 14 ದಿನಗಳವರೆಗೆ ಕಟ್ಟುನಿಟ್ಟಿನ ಸಂಪರ್ಕ ತಡೆಯಲ್ಲಿ ಇರಿಸಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.