ನಾಪೆÇೀಕ್ಲು, ಮೇ 27: ನಾಪೆÇೀಕ್ಲು ಪಟ್ಟಣದಲ್ಲಿ ಎಲ್ಲಾ ಅಂಗಡಿ ಮಾಲೀಕರು ಒಣಕಸ ಮತ್ತು ಹಸಿಕಸ ವಿಂಗಡಿಸದಿದ್ದರೆ ಅವರಿಗೆ ದಂಡ ವಿಧಿಸಲಾಗುವದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಹೇಳಿದರು.

ಕಸ ವಿಲೇವಾರಿ ಹಾಗೂ ಪ್ರವಾಹ ಮುನ್ನೆಚ್ಚರಿಕೆ ಬಗ್ಗೆ ಕರೆಯಲಾಗಿದ್ದ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭ 14ನೇ ಹಣಕಾಸು ಯೋಜನೆಯಡಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು. ಉಳಿದ ಕಾಮಗಾರಿಗಳನ್ನು ಕೂಡಲೇ ಮುಗಿಸುವಂತೆ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮಯ್ಯ ಸಲಹೆ ನೀಡಿದರು. ನಂತರ 15ನೇ ಹಣಕಾಸು ಯೋಜನೆಯಡಿಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಪಟ್ಟಿ ತಯಾರಿಸಲಾಯಿತು.

ಮಳೆಗಾಲದಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗುವ ಕಾರಣ ಕಸ ವಿಲೇವಾರಿಗೆ ಸಮಸ್ಯೆಯಾಗಿದೆ. ಮಾರುಕಟ್ಟೆ ಬಳಿಯಿರುವ ಜಾಗದಲ್ಲಿ ಕಸ ವಿಂಗಡನೆ ಸಾಧ್ಯವಾಗುತ್ತಿಲ್ಲ. ಪ್ಲಾಸ್ಟಿಕ್ ಬಳಕೆ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಲಾಗಿದೆ. ತಪ್ಪಿತಸ್ಥರಿಗೆ ದಂಡ ವಿಧಿಸಲಾಗುವದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಹೇಳಿದರು.

ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟ ಕಾವೇರಿ ನದಿ ತೀರದಲ್ಲಿ ವಾಸಿಸುವ ನಿವಾಸಿಗಳಿಗೆ ಪ್ರವಾಹ ಮುನ್ನೆಚ್ಚರಿಕೆ ನೋಟೀಸು ನೀಡಲಾಗಿದೆ ಎಂದು ಅವರು ಸಭೆಗೆ ತಿಳಿಸಿದರು. ವೇದಿಕೆಯಲ್ಲಿ ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ ಇದ್ದರು.

ಸಭೆಯಲ್ಲಿ ನಾಪೆÇೀಕ್ಲು ಹೋಬಳಿ ಕಂದಾಯ ಪರಿವೀಕ್ಷಕ ಶಿವಕುಮಾರ್, ಗ್ರಾಮ ಲೆಕ್ಕಾಧಿಕಾರಿ ಅಮೃತಾ ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.