ಮಡಿಕೇರಿ, ಮೇ 27: ಜಿಲ್ಲಾಧಿಕಾರಿ ಕಚೇರಿ ಮುಖ್ಯ ಪ್ರವೇಶ ದ್ವಾರದಲ್ಲಿಯೇ ಕಚೇರಿಗೆ ಪ್ರವೇಶಿಸುವವರಿಗೆ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಜ್ವರ ಇದೆಯೇ ಎಂದು ಪರೀಕ್ಷಿಸ ಲಾಗುತ್ತಿದೆ. ಅಂತೆಯೇ ಮಾಸ್ಕ್ ಧರಿಸದವರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕಚೇರಿಗೆ ಬರುವವರಿಗೆ ಸ್ಯಾನಿಟೈಸರ್ ನೀಡಲಾಗುತ್ತಿದ್ದು, ಯಾವುದೇ ಸೋಂಕು ಸಂಬಂಧಿತ ಸಮಸ್ಯೆಗಳ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.