ಮಡಿಕೇರಿ, ಮೇ 27: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಕ್ಷ್ಮಾಣು ಜೀವಿ ವಿಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರಯೋಗಾಲಯದಲ್ಲಿ ಕೋವಿಡ್ ಪರೀಕ್ಷೆ ಆರಂಭಗೊಂಡಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ (ಐಸಿಎಂಆರ್) ಕೋವಿಡ್ ಪರೀಕ್ಷೆಗೆ ಅನುಮತಿ ದೊರೆತಿದ್ದು, ಪ್ರಯೋಗಾಲ ಯದಲ್ಲಿ ಕೋವಿಡ್ ಪರೀಕ್ಷೆ ಆರಂಭಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಾ. 22 ರಂದು ಕೋವಿಡ್ ಪ್ರಯೋಗಾಲಯಕ್ಕೆ ಚಾಲನೆ ನೀಡಿದ್ದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಪ್ರಯೋಗಾಲಯಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಬುಧವಾರ (ಮೊದಲ ಪುಟದಿಂದ) ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ವೈದ್ಯಕೀಯ ಕಾಲೇಜಿನ ಸೂಕ್ಷ್ಮಾಣು ಜೀವಿ ವಿಭಾಗದ ಮುಖ್ಯಸ್ಥರಾದ ಡಾ.ನಜೀಮ ಅವರು ಕೋವಿಡ್ ಪ್ರಯೋಗಾಲಯ ಕಾರ್ಯ ಚಟುವಟಿಕೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಸಮುದಾಯ ವೈದ್ಯ ಶಾಸ್ತ್ರ ವಿಭಾಗದ ಡಾ. ಎಸ್.ಎಚ್. ಮಹೇಶ್ ಇತರರು ಇದ್ದರು.