ಕುಶಾಲನಗರ, ಮೇ 29: ಸ್ಥಳೀಯ ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ ಕುಶಾಲನಗರ ಗಡಿ ಭಾಗದ ಪೊಲೀಸ್ ತಪಾಸಣಾ ಕೇಂದ್ರದ ಕೊರೊನಾ ವಾರಿಯರ್ಸ್ ಸೇವೆಯ ನೆನಪಿಗಾಗಿ ಗಿಡ ನೆಡು ವುದರೊಂದಿಗೆ ಅಧಿಕಾರಿ, ಸಿಬ್ಬಂದಿ ಗಳನ್ನು ಗೌರವಿಸಲಾಯಿತು.
ಕುಶಾಲನಗರ ಪೊಲೀಸ್ ತಪಾಸಣಾ ಕೇಂದ್ರದ ಬಳಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ತಹಶೀಲ್ದಾರ್ ಗೋವಿಂದರಾಜ್, ಕುಶಾಲನಗರ ಡಿವೈಎಸ್ಪಿ ಹೆಚ್.ಎಂ. ಶೈಲೇಂದ್ರ, ವೃತ್ತ ನಿರೀಕ್ಷಕ ಎಂ. ಮಹೇಶ್, ವೈದ್ಯ ಡಾ. ಎಸ್.ಎಂ. ಭರತ್ ಅವರುಗಳಿಗೆ ಔಷಧಿಯ ಗಿಡ ನೀಡುವ ಮೂಲಕ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವ ಸಮರ್ಪಿಸಲಾಯಿತು. ಈ ಸಂದರ್ಭ ಮಾತನಾಡಿದ ಡಿವೈಎಸ್ಪಿ ಶೈಲೇಂದ್ರ, ಎಲ್ಲರ ಸಹಕಾರದೊಂದಿಗೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಸಮರ್ಪಕವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಯಿತು ಎಂದು ತಿಳಿಸಿದರು.
ಪೆÇಲೀಸ್, ಆರೋಗ್ಯ ಮತ್ತು ಕಂದಾಯ ಇಲಾಖೆಯ 25ಕ್ಕೂ ಅಧಿಕ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಳಗದ ಸದಸ್ಯರು ಹೂಗುಚ್ಚ ನೀಡುವ ಮೂಲಕ ಗೌರವಿಸಿದರು.
ಬಳಗದ ಸಂಚಾಲಕ ಎಂ.ಎನ್. ಚಂದ್ರಮೋಹನ್, ನಿವೃತ್ತ ಎಸಿಎಫ್ ಎಂ.ಎಸ್. ಚಿಣ್ಣಪ್ಪ, ತೋರೇರ ಉದಯಕುಮಾರ್, ಕೊಡಗನ ಹರ್ಷ, ವೈಶಾಖ್, ವಿ.ಆರ್. ಶಿವಶಂಕರ್, ವಿ.ಡಿ. ಪುಂಡರೀಕಾಕ್ಷ, ಉಮಾಶಂಕರ್, ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.
ಬಳಗದ ವತಿಯಿಂದ ಕೊರೊನಾ ವಾರಿಯರ್ಸ್‍ಗೆ ಬೆಳಗಿನ ಉಪಹಾರ ವ್ಯವಸ್ಥೆ ಕಲ್ಪಿಸಲಾಗಿತ್ತು.
ಸೋಮವಾರಪೇಟೆ, ಮೇ 29: ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್-19 ಜಾಗೃತಿ ಕಾರ್ಯದಲ್ಲಿ ತೊಡಗಿರುವ ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತರನ್ನು ಗ್ರಾ.ಪಂ. ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದಿಸ ಲಾಯಿತು. ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ಆರೋಗ್ಯ ಸಹಾಯಕಿಯರನ್ನು ಸನ್ಮಾನಿಸಿದರು. ನಂತರ ಪಂಚಾಯಿತಿಯ ಶೇ. 5ರ ಅನುದಾನದಡಿ ವಿಶೇಷಚೇತನರಿಗೆ ವೀಲ್‍ಚೇರ್ ವಿತರಿಸಲಾಯಿತು.
ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯರಾದ ಹೆಚ್.ಎನ್. ತಂಗಮ್ಮ, ಪಂಚಾಯಿತಿ ಅಧ್ಯಕ್ಷೆ ರಮ್ಯಾ ಕರುಣಾಕರ, ಸದಸ್ಯರಾದ ಸಿ.ಸಿ. ನಂದ, ಹೆಚ್.ಎಂ. ನತೀಶ್ ಮಂದಣ್ಣ, ಕೆ.ಜೆ. ಗಿರೀಶ್, ವಿ.ಎಸ್. ಜಯಲಕ್ಷ್ಮೀ ಸುಬ್ರಮಣಿ, ಕೆ.ಆರ್. ದಿವ್ಯ, ಧರ್ಮ, ಅಜೀಜ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಸಿ. ಪೂರ್ಣಕುಮಾರ್, ಲೆಕ್ಕಪರಿಶೋಧಕರಾದ ಪಿ.ಎಂ. ಸೀನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.ಕುಶಾಲನಗರ, ಮೇ 29: ಮಾನವ ಸಮುದಾಯವನ್ನು ಕಾಡುತ್ತಿರುವ ಕೊರೊನಾ ನಿಯಂತ್ರಿಸುವಲ್ಲಿ ಕೊಡಗು ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆ ಅಧಿಕಾರಿಗಳ ಶ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಐಎಎಸ್ ಅಧಿಕಾರಿ ಕೆಂಪ ಹೊನ್ನಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ಕೋವಿಡ್-19 ಕೇಂದ್ರದಲ್ಲಿ ಕೆಲಸ ನಿರ್ವಹಿಸಿದ ಪೊಲೀಸ್, ಆರೋಗ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುವುದು ನಾಗರಿಕರ ಕರ್ತವ್ಯವಾಗಿದೆ ಎಂದರು.
ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೋವಿಂದರಾಜು, ಡಿವೈಎಸ್ಪಿ ಹೆಚ್.ಎಂ. ಶೈಲೇಂದ್ರ, ವೃತ್ತ ನಿರೀಕ್ಷಕ ಎಂ. ಮಹೇಶ್, ವೈದ್ಯರಾದ ಡಾ. ಎಸ್.ಎಂ. ಭರತ್ ಸೇರಿದಂತೆ ವಿವಿಧ ಇಲಾಖೆಗಳ 75ಕ್ಕೂ ಅಧಿಕ ಅಧಿಕಾರಿ, ಸಿಬ್ಬಂದಿಗಳನ್ನು ಗೌರವಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭ ಕಾರ್ಯಕ್ರಮ ಆಯೋಜಕರಾದ ಉದ್ಯಮಿ ವಿ.ಡಿ. ಪುಂಡರೀಕಾಕ್ಷ, ಉಮಾಶಂಕರ್, ಪ.ಪಂ. ಸದಸ್ಯೆ ರೂಪಾ ಉಮಾಶಂಕರ್, ಕೂಡಿಗೆ ಸೈನಿಕ ಶಾಲೆಯ ಉಪ ಪ್ರಾಂಶುಪಾಲರಾದ ಕರ್ನಲ್ ಸೀಮಾ ತ್ರಿಪಾಠಿ, ಕ್ಯಾಪ್ಟನ್ ಸತೀಶ್ ಮತ್ತಿತರರು ಇದ್ದರು.