ಸೋಮವಾರಪೇಟೆ, ಮೇ 29: ಪಟ್ಟಣ ಸೇರಿದಂತೆ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ತಾ. 30 ರಂದು (ಇಂದು) ಹಗಲಿನ ವೇಳೆಯಲ್ಲಿ ವಿದ್ಯುತ್ ಸರಬರಾಜು ಇರುವದಿಲ್ಲ ಎಂದು ಸೆಸ್ಕ್‍ನ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಪಿ. ಸಂತೋಷ್ ತಿಳಿಸಿದ್ದಾರೆ.

ಐಪಿಡಿಎಸ್ ಯೋಜನೆಯಡಿ 33 ಕೆ.ವಿ. ವಿದ್ಯುತ್ ಮಾರ್ಗದ ವಾಹಕ ಬದಲಾವಣೆ ಕಾಮಗಾರಿ ನಿರ್ವಹಿಸುವ ನಿಟ್ಟಿನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗುತ್ತದೆ. ಇದರಿಂದಾಗಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ಚೌಡ್ಲು, ಹಾನಗಲ್, ದೊಡ್ಡಮಳ್ತೆ, ಐಗೂರು, ಅಬ್ಬೂರುಕಟ್ಟೆ, ಶಾಂತಳ್ಳಿ, ಕಿರಗಂದೂರು, ಬೆಟ್ಟದಳ್ಳಿ, ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.