ಮಡಿಕೇರಿ, ಮೇ 30: ಪ್ರಸಕ್ತ ಸಾಲಿನ ಪ್ರಧಾನಮಂತ್ರಿಯವರ ಉದ್ಯೋಗ ಸೃಜನ [ಪಿ.ಎಂ.ಇ.ಜಿ.ಪಿ.] ಕಾರ್ಯಕ್ರಮದಡಿ ಕೈಗಾರಿಕೆ/ ಸೇವಾ ಘಟಕಗಳ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ತುಂಬಿದ ಅರ್ಹ ಅಭ್ಯರ್ಥಿಗಳು ತಿತಿತಿ.ಞviಛಿ.oಡಿg.iಟಿ (ಠಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ) ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಅದರ ಪ್ರತಿಯನ್ನು 2 ಸೆಟ್ ದಾಖಲಾತಿಗಳನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಈ ಕಚೇರಿಗೆ ಸಲ್ಲಿಸುವುದು. ಅಪೂರ್ಣವಾಗಿ ಭರ್ತಿ ಮಾಡಿದ ಹಾಗೂ ದಾಖಲೆಗಳನ್ನು ನೀಡದೆ ಇರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ, ದೂರವಾಣಿ ಸಂಖ್ಯೆ: 08272-228431 ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನ ಆಗಿರುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.