ಸಿದ್ದಾಪುರ, ಮೇ 31 : ಮಳೆ ಸಮೀಸಿಸುತ್ತಿದ್ದು, ನೆಲ್ಲಿಹುದಿಕೇರಿ ಹಾಗೂ ವಾಲ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ನದಿತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಹಾಗೂ ಎಚ್ಚರಿಕೆ ವಹಿಸುವಂತೆ ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನೋಟೀಸ್ ಹಾಗೂ ಪ್ರಕಟಣೆಯ ಮೂಲಕ ತಿಳಿಸಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.