ಮಡಿಕೇರಿ, ಮೇ 30: ಕೊಲೆ ಯತ್ನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾ. 29ರಂದು ಮುಕ್ಕೋಡ್ಲುವಿನ ವೇಣುಗೋಪಾಲ್ ಹಾಗೂ ಅವರ ತಾಯಿಯ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪದಡಿ ಪ್ರದೀಪ್ ಹಾಗೂ ಭೀಮಯ್ಯ ಎಂಬವರುಗಳನ್ನು ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ತಂಡದವರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.