ಮಡಿಕೇರಿ, ಮೇ. 30 : ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ಪ್ರಸ್ತುತದ ಅನಿವಾರ್ಯತೆಯಿಂದಾಗಿ ತಾತ್ಕಾಲಿಕ ವಾಗಿ ಮುಂದೂಡಲು ತೀರ್ಮಾನಿಸ ಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಗ್ರಾ.ಪಂ. ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವದು ಎಂದು ರಾಜ್ಯ ಚುನಾವಣಾ ಆಯೋಗವು ಪ್ರಕಟಿಸಿದೆ.

ಆಯೋಗದ ಅಧೀನ ಕಾರ್ಯದರ್ಶಿಗಳು ಈ ಕುರಿತಾಗಿ ತಾ. 28ರಂದು ಅಧಿಕೃತ ಪ್ರಕಟಣೆ ಹೊರಡಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ವಾಸ್ತವ ಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳು ನೀಡಿರುವ ವರದಿಗಳನ್ನು ಪರಿಶೀಲಿಸಲಾಗಿ ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ಸಂಪೂರ್ಣ ಜಿಲ್ಲಾಡಳಿತವು ತೊಡಗಿರುವುದರಿಂದ ಚುನಾವಣಾ ಕಾರ್ಯಕ್ಕೆ ಸಿಬ್ಬಂದಿಗಳ, ಕೊರತೆ, ಸಾರಿಗೆ ವ್ಯವಸ್ಥೆ ಕೊರತೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತೊಂದರೆಗಳುಂಟಾಗುವುದಾಗಿ ಕಂಡುಬಂದಿರುತ್ತದೆ.

ಚುನಾವಣೆಗೆ ಸಂಬಂಧಿಸಿದಂತೆ, ಮತದಾರರ ಪಟ್ಟಿ ತಯಾರಿಕೆ, ಮತದಾನ ಮತ್ತು ಮತಗಳ ಎಣಿಕೆ ದಿನಾಂಕಗಳಂದು ಜನಸಾಮಾನ್ಯ ಹಾಗೂ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು, ಸಿಬ್ಬಂದಿಗಳು, ಪೋಲಿಂಗ್ ಏಜೆಂಟರು, ರಾಜಕೀಯ ಪಕ್ಷಗಳು, ಸಹಾಯಕ ಸಿಬ್ಬಂದಿಗಳ ಓಡಾಟ ಮತ್ತು ಒಂದು ಕಡೆ ಸೇರಬೇಕಾದ ಸಂದರ್ಭಗಳು ಅನಿವಾರ್ಯವಾಗಿ ಉಂಟಾಗುತ್ತದೆ. ಇದರಿಂದ ಜನಸಾಮಾನ್ಯರ ಆರೋಗ್ಯದ ರಕ್ಷಣೆಗೆ ಬಾಧಕ ಉಂಟಾಗುತ್ತದೆ ಮತ್ತು ವೈರಸ್ ಹರಡುವಿಕೆಗೆ ಅವಕಾಶ ಉಂಟಾಗುತ್ತದೆ.

ಸರ್ವೋಚ್ಚ ನ್ಯಾಯಾಲಯವು ಕಿಷನ್‍ಸಿಂಗ್ ತೋಮರ್ ವಿರುದ್ಧ ಸಿಟಿ ಮುನಿಸಿಪಲ್ ಕಾರ್ಪೋರೇಷನ್, ಅಹಮದಾಬಾದ್ ಮತ್ತು ಇತರರು ಪ್ರಕರಣದಲ್ಲಿ ನೀಡಿರುವ ಆದೇಶದಲ್ಲಿ, ಮಾನವ ನಿರ್ಮಿತ ಅವಘಡಗಳಿಂದಾಗಿ ಕಾನೂನು ಸುವ್ಯವಸ್ಥೆ ಹಾಳಾದ ಪರಿಸ್ಥಿತಿಯಲ್ಲಿ ಅಥವಾ ನೈಸರ್ಗಿಕ ವಿಪತ್ತು ಸಂದರ್ಭಗಳಲ್ಲಿ ಚುನಾವಣೆ ಪ್ರಕ್ರಿಯೆ ಕೈಗೊಳ್ಳುವ ಪ್ರಾಧಿಕಾರಗಳಿಗೆ ಚುನಾವಣೆ ನಡೆಸುವುದು ಕಷ್ಟಸಾಧ್ಯವೆಂದು ಹಾಗೂ ಇಂತಹ ಪರಿಸ್ಥಿತಿಯನ್ನು “ಅಸಾಧಾರಣ ಪರಿಸ್ಥಿತಿ” (ಇxಛಿeಠಿಣioಟಿಚಿಟ ಅiಡಿಛಿumsಣಚಿಟಿಛಿe) ಎಂದು ಉಲ್ಲೇಖಿಸಲಾಗಿರುತ್ತದೆ.

ರಾಜ್ಯ ಚುನಾವಣಾ ಆಯೋಗವು, ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ನಡೆಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲಿಸಿದೆ. ಪ್ರಸ್ತುತ ಪರಿಸ್ಥಿತಿಯನ್ನು “ಅಸಾಧಾರಣ ಪರಿಸ್ಥಿತಿ” (ಇxಛಿeಠಿಣioಟಿಚಿಟ ಅiಡಿಛಿumsಣಚಿಟಿಛಿe) ಎಂದು ಪರಿಗಣಿಸಿ, ಭಾರತ ಸಂವಿಧಾನದ ಪರಿಚ್ಛೇದ 243-ಕೆ ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಪಂಚಾಯಿತಿಗಳ ಚುನಾವಣೆಯನ್ನು ನಡೆಸುವ ಸಂಬಂಧ ಪ್ರಾದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ಅನಿವಾರ್ಯತೆಯಿಂದ ತಾತ್ಕಾಲಿಕವಾಗಿ ಮುಂದೂಡಲು ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವದು ಎಂದು ಸ್ಪಷ್ಟಪಡಿಸಲಾಗಿದೆ.