ಮಡಿಕೇರಿ, ಮೇ 30: ಕೊಡಗು ಜಿಲ್ಲೆಯಿಂದ ಪಶ್ಚಿಮ ಬಂಗಾಳ ರಾಜ್ಯಕ್ಕೆ 468 ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಯಿತು. ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆಯಿಂದ ಒಟ್ಟು 15 ಬಸ್‍ಗಳಲ್ಲಿ ಹಾಸನಕ್ಕೆ ಕಳುಹಿಸಿಕೊಡಲಾಯಿತು.

ಹಾಸನದಿಂದ ಪಶ್ಚಿಮ ಬಂಗಾಳ ರಾಜ್ಯಕ್ಕೆ ರೈಲು ಮೂಲಕ ಪ್ರಯಾಣ ಮಾಡಲಿದ್ದಾರೆ ಎಂದು ಉಪ ವಿಭಾಗಾಧಿಕಾರಿ ಟಿ. ಜವರೇಗೌಡ ಮಾಹಿತಿ ನೀಡಿದರು.

ಸರ್ಕಲ್ ಇನ್ಸ್‍ಪೆಕ್ಟರ್ ಮೇದಪ್ಪ, ಕಾರ್ಮಿಕ ಅಧಿಕಾರಿ ಯತ್ನಟ್ಟಿ, ತಹಶೀಲ್ದಾರ್ ಗೋವಿಂದರಾಜು, ತಾ.ಪಂ. ಇಒ ಸುನಿಲ್‍ಕುಮಾರ್, ಪ.ಪಂ. ಮುಖ್ಯಾಧಿಕಾರಿ ಶ್ರೀಧರ್ ಇದ್ದರು.