ಮಡಿಕೇರಿ, ಮೇ 31: ಸರ್ಕಾರದ ತಾ. 30ರ ಆದೇಶದಂತೆ ಹಾಲಿ ಜಾರಿಯಲ್ಲಿರುವ ಲಾಕ್‍ಡೌನ್ ನಿರ್ಬಂಧಕಾಜ್ಞೆಯನ್ನು ಜೂ. 30ರ ವರೆಗೆ ವಿಸ್ತರಿಸಲಾಗಿದೆ. ಸರ್ಕಾರದ ಇತ್ತೀಚಿನ ಮಾರ್ಗಸೂಚಿಯಂತೆ ತುರ್ತು ಮತ್ತು ಅವಶ್ಯ ಸೇವೆಗಳನ್ನು ಹೊರತುಪಡಿಸಿ, ಮುಂದಿನ ಆದೇಶದವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಲಾಕ್‍ಡೌನ್ ಕಫ್ರ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.