ಶನಿವಾರಸಂತೆ, ಜೂ. 1: ಸೋಮವಾರಪೇಟೆ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಕಾಂಗ್ರೆಸ್ ಅಧ್ಯಕ್ಷ ಎಂ.ಎನ್. ಶಾಹಿದ್‍ಖಾನ್ ಅವರು ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಆಟೋ ಚಾಲಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ಸುಮಾರು 500 ಮಂದಿಗೆ ಉಚಿತ ಮಾಸ್ಕ್ ವಿತರಣೆ ಮಾಡಿದರು.