ಮಡಿಕೇರಿ, ಜೂ.1: ಕುಂಬಳದಾಳು ಗ್ರಾಮದ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳ ಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಪ್ರತಿ ಮಳೆಗಾಲದಲ್ಲಿ ಹಳ್ಳಕೊಳ್ಳ ಗಳಾಗುವ ರಸ್ತೆಯಲ್ಲಿ ಸುಗಮ ಸಂಚಾರ ಅಸಾಧ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಡಿಕೇರಿ ತಾಲೂಕಿನ ಕುಂಬಳದಾಳು ಗ್ರಾಮಕ್ಕೆ ತೆರಳುವ ರಸ್ತೆಯನ್ನು ಉತ್ತಮ ದರ್ಜೆಯ ರಸ್ತೆಯನ್ನಾಗಿ ಮಾಡುವ ನಿಟ್ಟಿನಲ್ಲಿ 2018 ಫೆಬ್ರವರಿಯಲ್ಲಿ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಭೂಮಿ ಪೂಜೆ ನೆರವೇರಿಸಿದರು. ನಂತರ 2019ರಲ್ಲಿ ಕಾಮಗಾರಿಯನ್ನು ಆರಂಭಿಸಲಾಯಿತು. ಆದರೆ ಸರಕಾರÀ ಬದಲಾವಣೆಯಾದಂತೆ ಕಾಮಗಾರಿಯೂ ಸ್ಥಗಿತಗೊಂಡಿತು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಗಮನ ಸೆಳೆಯಲಾಗಿತ್ತು. ಅಲ್ಲದೆ ಗುಂಡಿಬಿದ್ದ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಅಸಮಾಧಾನ ವ್ಯಕ್ತಪಡಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಸ್ಪಂದನ ದೊರೆತಿಲ್ಲ ಎಂದು ಗ್ರಾಮದ ಪ್ರಮುಖರು ಆರೋಪಿಸಿದ್ದಾರೆ.