ಸೋಮವಾರಪೇಟೆ, ಜೂ. 1: ಸಮೀಪದ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಪಾರೆ ಗ್ರಾಮದಲ್ಲಿ ಕೊರೊನಾ ಸೋಂಕು ತಡೆಗಟ್ಟುವ ಸಂಬಂಧ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಗ್ರಾಮದ ಮನೆಗಳಿಗೆ ತೆರಳಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು. ಸಾರ್ವಜನಿಕ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಿ ಓಡಾಡುವಂತೆ ತಿಳುವಳಿಕೆ ಹೇಳಲಾಯಿತು. ಮಾಸ್ಕ್ ಧರಿಸದೇ ಅಂಗಡಿಗೆ ಬರುವ ಗ್ರಾಹಕರಿಗೆ ಯಾವದೇ ವಸ್ತುಗಳನ್ನು ನೀಡದೇ ಅವರಲ್ಲೂ ಜಾಗೃತಿ ಮೂಡಿಸುವಂತೆ ಅಂಗಡಿ ಮಾಲೀಕರಿಗೆ ತಿಳಿಸಲಾಯಿತು. ಈ ಸಂದರ್ಭ ಗಣಗೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕಾವೇರಿ, ಆಶಾ ಕಾರ್ಯಕರ್ತೆ ಚಂದ್ರಕಲಾ ಮತ್ತು ತಂಗಮಣಿ, ಅಂಗನವಾಡಿ ಕಾರ್ಯಕರ್ತೆ ಗೀತಾ, ಮಕ್ಕಳ ಸಹಾಯವಾಣಿ ಕೇಂದ್ರದ ಕುಸುಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು.