ಗೋಣಿಕೊಪ್ಪಲು, ಜೂ. 2: ಮುಂದೆ ಬರುವ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಧೈರ್ಯದಿಂದ ಎದುರಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ನಾಯಕರುಗಳು ಕಾರ್ಯಪ್ರವೃತ್ತರಾಗಬೇಕೆಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕರೆ ನೀಡಿದರು. ಗೋಣಿಕೊಪ್ಪಲುವಿನ ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಆಯೋಜನೆಗೊಂಡಿದ್ದ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ 21 ನೂತನ ವಲಯ ಅಧ್ಯಕ್ಷರುಗಳ ಪದÀಗ್ರಹಣ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ವಲಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟನೆ ಮಾಡಬೇಕು. ಪಕ್ಷದಿಂದ ದೂರ ಉಳಿದಿರುವವರನ್ನು ಪಕ್ಷಕ್ಕೆ ಮರಳಿ ಕರೆ ತರಬೇಕು. ಈ ನಿಟ್ಟಿನಲ್ಲಿ ನೂತನ ಅಧ್ಯಕ್ಷರುಗಳು ಹೆಚ್ಚಿನ ಶ್ರಮ ವಹಿಸಬೇಕೆಂದು ಹೇಳಿದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ಮೀದೇರಿರ ನವೀನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಬಲ್ಯಮುಂಡೂರು, ಹುದಿಕೇರಿ, ಪೊನ್ನಂಪೇಟೆ, ಗೋಣಿಕೊಪ್ಪ, ಬಿ.ಶೆಟ್ಟಿಗೇರಿ, ನಾಲ್ಕೇರಿ, ತಿತಿಮತಿ, ದೇವರಪುರ, ಶ್ರೀಮಂಗಲ, ಟಿ.ಶೆಟ್ಟಿಗೇರಿ, ಬಿರುನಾಣಿ, ಬಾಳೆಲೆ, ಕೆ.ಬಾಡಗ, ಕುಟ್ಟ, ಕಿರುಗೂರು, ಹಾತೂರು, ನಿಟ್ಟೂರು, ಕಾನೂರು, ಮಾಯಮುಡಿ ಹಾಗೂ ಅರುವತೋಕ್ಲು ವಲಯದ ನೂತನ ಅಧ್ಯಕ್ಷರಿಗೆ ನೇಮಕಾತಿ ಆದೇಶ ನೀಡಲಾಯಿತು.

ಮಾಜಿ ವಿಧಾನ ಪರಿಷತ್‍ನ ಸದಸ್ಯ ಅರುಣ್ ಮಾಚಯ್ಯ, ಜಿಲ್ಲಾ ಪಂಚಾಯತ್ ಸದಸ್ಯ ಮುಕ್ಕಾಟೀರ ಶಿವು ಮಾದಪ್ಪ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ತೀತಿರ ಧರ್ಮಜ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಎ.ಜೆ. ಬಾಬು, ಅಲ್ಪಸಂಖ್ಯಾತ ಘಟಕz ಅಧ್ಯಕ್ಷ ಆಲೀರ ರಶೀದ್, ಹಿಂದುಳಿದ ವರ್ಗಗಳ ಅಧ್ಯಕ್ಷ ಸಾಜಿ ಅಚ್ಚುತ್ತನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ, ಮಹಿಳಾ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷೆ ಕಡೇಮಾಡ ಕುಸುಮ ಜೋಯಪ್ಪ, ಉಪಸ್ಥಿತರಿದ್ದರು.

ವಿವಿಧ ವಲಯದ ಅಧ್ಯಕ್ಷರುಗಳಾದ ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ ಪೆಮ್ಮಂಡ ಅರುಣ, ಸಿ.ಪಿ .ಬೋಪಣ್ಣ, ಅಪ್ಪಣ್ಣ, ಎಂ.ಎ. ಪವನ್ ಚಿಟ್ಟಿಯಪ್ಪ, ಮುಕ್ಕಾಟೀರ ಸಂದೀಪ್, ತೀತಿಮಾಡ ಸದನ್ ,ತಾ.ಪಂ. ಸದಸ್ಯ ಪಲ್ವೀನ್ ಪೂಣಚ್ಚ, ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಕ್ಷದ ಮುಖಂಡರಾದ ಎ.ಜೆ. ಬಾಬು ಸ್ವಾಗತಿಸಿ, ಬಾಲಕೃಷ್ಣ ವಂದಿಸಿದರು.