ಕುಶಾಲನಗರ, ಜೂ. 3: ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಫೇಸ್‍ಬುಕ್ ನಲ್ಲಿ ಅವಹೇಳನ ಮಾಡಿ ಪೆÇೀಸ್ಟ್ ಹಾಕಿದ ಮಹಿಳೆ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಕುಶಾಲನಗರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ವಿಂಧ್ಯ ಪೂಣಚ್ಚ ಎಂಬ ಮಹಿಳೆ ತನ್ನ ಫೇಸ್‍ಬುಕ್ ಪೇಜ್‍ನಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಾಕಾರಿ ಹೇಳಿಕೆಗಳನ್ನು ಪೋಸ್ಟ್ ಹಾಕಿರುವುದಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ದೂರು ನೀಡಿದ್ದು, ನಂತರ ಆ ಪೋಸ್ಟ್‍ಗಳನ್ನು ಡಿಲೀಟ್ ಮಾಡುವುದರೊಂದಿಗೆ ತನ್ನ ವಿಳಾಸವನ್ನು ಕೂಡ ತೆಗೆದುಹಾಕಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳುವಂತೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್, ಇಂಟೆಕ್ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಆಗ್ರಹಿಸಿದ್ದಾರೆ.

ಈ ಸಂದರ್ಭ ಕೆಪಿಸಿಸಿ ಮೈಸೂರು ವಿಭಾಗದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಚಿನ್ನಪ್ಪ, ಕೆಪಿಸಿಸಿ ರಾಜ್ಯ ಕಾರ್ಮಿಕ ಘಟಕದ ಕಾರ್ಯದರ್ಶಿ ಅಜ್ಜಳ್ಳಿ ರವಿ, ಕುಶಾಲನಗರ ಬ್ಲಾಕ್ ಉಸ್ತುವಾರಿ ಪ್ರದೀಪ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಇ.ಸುರೇಶ್, ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ಸೂರಜ್ ಹೊಸೂರು, ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ತ್ರಿನೇಶ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೂವಯ್ಯ, ಡಿಸಿಸಿ ಸದಸ್ಯೆ ಗೀತಾ ಧರ್ಮಪ್ಪ, ಯುವ ಕಾಂಗ್ರೆಸ್‍ನ ದೇವ್, ಎಸ್‍ಟಿ ಘಟಕದ ಮಾಜಿ ಜಿಲ್ಲಾಧ್ಯಕ್ಷ ಚಂದ್ರ ಮತ್ತಿತರರು ಇದ್ದರು.

ಪ್ರವಾದಿ ಮಹಮ್ಮದ್ ಅವಹೇಳನ ಮಾಡಿದ ವಿಂಧ್ಯ ಪೂಣಚ್ಚ ವಿರುದ್ಧ ಕುಶಾಲನಗರ ಪಿಎಫ್‍ಐ ಕಾರ್ಯಕರ್ತ ಅಜೀಜ್ ಎಂಬವರು ಕುಶಾಲನಗರ ಠಾಣೆಯಲ್ಲಿ ದೂರು ನೀಡಿ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.