ಕೂಡಿಗೆ, ಜೂ. 3: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಗುಂದ ಗ್ರಾಮದಲ್ಲಿರುವ ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಜಲಾಶಯಕ್ಕೆ ಒಳ ನೀರಿನ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ.

ಹಾರಂಗಿ ಜಲಾಶಯದ ಮೇಲ್ಭಾಗದ ಪ್ರದೇಶದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಅಣೆಕಟ್ಟೆಗೆ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.

ಅಣೆಕಟ್ಟೆಯಲ್ಲಿ ಕಳೆದ ವರ್ಷ ಇದೇ ದಿನಕ್ಕೆ 2805.64 ಕ್ಯೂಸೆಕ್ ನೀರು ಇತ್ತು. ಕಳೆದ 24 ಗಂಟೆಯಲ್ಲಿ ಜಲಾಶಯಕ್ಕೆ 108 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಅಣೆಕಟ್ಟೆಯ ಸಂಗ್ರಹ ಸರಾಸರಿ ಪ್ರಮಾಣ 2854.5 ಕ್ಯೂಸೆಕ್. ಇದೀಗ ನೀರಿನ ಪ್ರಮಾಣ 2830.84 ಕ್ಯೂಸೆಕ್ ಇದೆ ಎಂದು ಅಣೆಕಟ್ಟೆ ಉಸ್ತುವಾರಿ ಇಂಜಿನಿಯರ್ ನಾಗರಾಜ್ ತಿಳಿಸಿದ್ದಾರೆ.