ಮಡಿಕೇರಿ, ಜೂ. 3: ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೆಹರೂ ನಗರದ ಏಳನೇ ಬ್ಲಾಕ್‍ನಲ್ಲಿ ಸ್ಥಗಿತಗೊಂಡಿರುವ ಭಾರೀ ತಡೆಗೋಡೆ ಕಾಮಗಾರಿ ಸಂಬಂಧ ಗುತ್ತಿಗೆದಾರನಿಗೆ ನೋಟೀಸ್ ನೀಡಲಿರುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ತಡೆಗೋಡೆ ಕಾಮಗಾರಿಗೆ ಯಾವುದೇ ಹಣದ ಕೊರತೆ ಇಲ್ಲ. ಕೆಲಸ ಆರಂಭಿಸಿದ ಗುತ್ತಿಗೆದಾರ ಇದೀಗ ಕಾಮಗಾರಿ ನಿರ್ವಹಿಸಲು ಸಾಧ್ಯವಾಗದೆ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ.

ಈ ಸಂಬಂಧ ಕಾರಣ ಕೇಳಿ ಗುತ್ತಿಗೆದಾರನಿಗೆ ನೋಟೀಸ್ ಜಾರಿ ಮಾಡಲಾಗುತ್ತದೆ. 24 ಗಂಟೆಯೊಳಗಾಗಿ ಕಾಮಗಾರಿ ಸ್ಥಗಿತಕ್ಕೆ ಸೂಕ್ತ ಕಾರಣ ನೀಡದಿದ್ದಲ್ಲಿ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದೆಂದು ‘ಶಕ್ತಿ’ಯಲ್ಲಿ ಪ್ರಕಟಗೊಂಡ ವರದಿಗೆ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.