ಕುಶಾಲನಗರ, ಜೂ. 4 : ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಜುಲೈ ತಿಂಗಳಲ್ಲಿ ಶಾಲೆಗಳನ್ನು ತೆರೆಯದಂತೆ ಹಾಗೂ ಆನ್ಲೈನ್ ತರಗತಿ ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ಕಾವಲುಪಡೆ ವತಿಯಿಂದ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಎಲ್ಲೆಡೆ ಕೊರೊನಾ ಆತಂಕದ ನಡುವೆ ಮಕ್ಕಳಿಗೆ ಕೊರೊನಾ ಬಾಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ತಕ್ಷಣ ಕೈಬಿಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಜಿಲ್ಲಾಧ್ಯಕ್ಷ ಎಂ.ಕೃಷ್ಣ, ಕಾವಲುಪಡೆಯ ಮಹಿಳಾ ಘಟಕದ ನಗರಾಧ್ಯಕ್ಷೆ ಇಂದಿರಾ, ಸಾಂಸ್ಕøತಿಕ ಘಟಕದ ವಿಜಯ್ಕುಮಾರ್ ಮತ್ತಿತರರು ಇದ್ದರು.