ಕುಶಾಲನಗರ, ಜೂ. 4: ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ 107ನೇ ಮಹಾ ಆರತಿ ಕಾರ್ಯಕ್ರಮ ತಾ. 5 ರಂದು (ಇಂದು) ಕುಶಾಲನಗರದಲ್ಲಿ ನಡೆಯಲಿದೆ. ಸಂಜೆ 5.30 ಕ್ಕೆ ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಆರತಿ ಕಾರ್ಯಕ್ರಮ ಜರುಗಲಿದೆ. ಇದೇ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯ್ತಿ, ಅರಣ್ಯ ಇಲಾಖೆ ಸಹಯೋಗದೊಂದಿಗೆ ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಂಜೆ 4.30 ಕ್ಕೆ ನದಿ ತಟದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.