ಮಡಿಕೇರಿ, ಜೂ. 4: ಪ್ರಸಕ್ತ (2020) ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇದ್ದ 38 ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್, 12 ಮಹಿಳಾ ಪೊಲೀಸ್ ಕಾನ್ಸ್‍ಟೇಬಲ್ ಹಾಗೂ 50 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜೂನ್, 22 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್ ತಿತಿತಿ.ಞsಠಿ.gov.iಟಿ ನಲ್ಲಿ ಪಡೆಯಬಹುದಾಗಿದೆ ಎಂದು ಪೊಲೀಸ್ ಅಧೀಕ್ಷಕಿ ಡಾ. ಡಿ.ಪಿ. ಸುಮನ್ ತಿಳಿಸಿದ್ದಾರೆ.